ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಮ್ ICU ಗೆ ಶಿಫ್ಟ್
ರಾಜಸ್ಥಾನ : ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಕಾರಣ ಸೆರೆವಾಸದಲ್ಲಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಕೋವಿಡ್ ಪಾಸಿಟಿವ್ ಆದ ನಂತರ , ಉಂಟಾಗಿತ್ತು.. ಇದಾದ ಬಳಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.. ಆದ್ರೆ ಆರೋಗ್ಯ ಸ್ಥಿತಿ ತೀವ್ರ ಗಣಂಭೀರವಾದ ಕಾರಣಕ್ಕೆ ICU ಗೆ ಶಿಫ್ಟ್ ಮಾಡಿ ವೆಂಟಿಲೇಟರ್ ನ ಸಹಾಯದಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಸಾರಾಮ್ ಬಾಪು ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಂದ್ಹಾಗೆ ಇತ್ತೀಚೆಗೆ ಬಾಪುಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಆರೋಗ್ಯ ಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಲೇ ಹೋದ ಕಾರಣ ರಾಜಸ್ಥಾನದ ಜೋಧ್ ಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇದೀಗ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ 2018ರ ಅಕ್ಟೋಬರ್ 1 ರಂದು ಜೋಧಪುರ ನ್ಯಾಯಾಲಯ ಅವರನ್ನು ದೋಷಿ ಎಂದು ಪರಿಗಣಿಸಿತ್ತು.