12 ನೇ ತರಗತಿ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಬಾಲಕಿಯರಿಗೂ ಸ್ಕೂಟರ್ !
ಅಸ್ಸಾಂ, ಜನವರಿ 05: ಅಸ್ಸಾಂ ಶಿಕ್ಷಣ ಸಚಿವ ಹಿಮಂತ ಬಿಸ್ವಾ ಶರ್ಮಾ ತಮ್ಮ ರಾಜ್ಯದ ಬಾಲಕಿಯರ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಬಾಲಕಿಯರಿಗೆ ರಾಜ್ಯ ಸರ್ಕಾರ ಸ್ಕೂಟರ್ ಮತ್ತು ಆರ್ಥಿಕ ಪ್ರೋತ್ಸಾಹ ನೀಡಲಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ನಿಯಮಿತವಾಗಿ ತರಗತಿಗಳಿಗೆ ಹಾಜರಾಗುವಂತೆ ಅವರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜ್ಞಾನ್ ಭಾರತಿ ಯೋಜನೆಯಡಿ ಅಸ್ಸಾಂ ಸರ್ಕಾರ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದ 12 ನೇ ತರಗತಿಯ ಬಾಲಕಿಯರಿಗೆ 22,000 ದ್ವಿಚಕ್ರ ವಾಹನಗಳನ್ನು ವಿತರಿಸುತ್ತಿದೆ ಎಂದು ಸಚಿವರು ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
2018 ಮತ್ತು 2019 ರಲ್ಲಿ ಪ್ರಥಮ ವಿಭಾಗದಲ್ಲಿ 12 ನೇ ತರಗತಿ ಪರೀಕ್ಷೆ ಉತ್ತೀರ್ಣರಾದ ಎಲ್ಲ ಬಾಲಕಿಯರಿಗೂ ಸ್ಕೂಟರ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಚೀನಾದ ಅರ್ಥಿಕ ನೀತಿಗೆ ಪಾಕ್ ಪ್ರಧಾನಿ ಜೈಕಾರ – ಮತ್ತೆ ಚೀನಾದ ಹಣಕಾಸಿನ ನಿರೀಕ್ಷೆಯಲ್ಲಿ ಪಾಕ್
ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ಎಲ್ಲ ಬಾಲಕಿಯರಿಗೆ ಆರ್ಥಿಕ ಪ್ರೋತ್ಸಾಹ ನೀಡಲಾಗುವುದು ಮತ್ತು ಈ ತಿಂಗಳ ಅಂತ್ಯದ ವೇಳೆಗೆ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಅಸ್ಸಾಂ ಶಿಕ್ಷಣ ಸಚಿವರು ಹೇಳಿದ್ದಾರೆ.

ಶಾಲಾ ವಿದ್ಯಾರ್ಥಿನಿಯರಿಗೆ ಪ್ರತಿದಿನ 100 ರೂ, ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕ್ರಮವಾಗಿ 1,500 ಮತ್ತು 2,000 ರೂ. ನೀಡಲಾಗುವುದು.
ಇದರಿಂದ ಅವರು ಶಾಲಾ ಕಾಲೇಜುಗಳಿಗೆ ಹಾಜರಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1345760948200513538?s=19
https://twitter.com/SaakshaTv/status/1345760563486289920?s=19








