ಜೈಲಿನಲ್ಲಿನ 52 ಖೈದಿಗಳಿಗೆ ಕೋವಿಡ್ ಪಾಸಿಟಿವ್
ಅಸ್ಸಾಂ : ಅಸ್ಸಾಂನ ದಿಬ್ರುಗಢ ಸೆಂಟ್ರಲ್ ಜೈಲಿನಲ್ಲಿರುವ 52 ಖೈದಿಗಳಿಗೆ ಕೊರೋನ ಸೋಂಕು ದೃಢಪಟ್ಟಿದ್ದು ಅವರನ್ನು ಜೈಲಿನ ಆವರಣದಲ್ಲೇ ಪ್ರತ್ಯೇಕವಾಗಿ ಇರಿಸುವ ವ್ಯವಸ್ಥೆ ಮಾಡಲಾಗಿದೆ.
ಜೈಲಿನಲ್ಲಿರುವ 530 ಖೈದಿಗಳಲ್ಲಿ 223 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ 52 ಜನರಲ್ಲಿ ಸೋಂಕು ದೃಢಪಟ್ಟಿದೆ. ಉಳಿದವರಿಗೂ ಶೀಘ್ರ ಪರೀಕ್ಷೆ ನಡೆಸಲಾಗುವುದು. ಸೋಂಕು ದೃಢಪಟ್ಟವರನ್ನು ಜೈಲಿನ ಆವರಣದೊಳಗೆ ಪ್ರತ್ಯೇಕವಾಗಿ ಇರಿಸಲಾಗಿದೆ.
ಅಂದ್ಹಾಗೆ ಕೋವಿಡ್ ಮೊದಲ ಅಲೆಯ ವೇಳೆ ಅಸ್ಸಾಂನಲ್ಲಿರುವ ಒಟ್ಟು 31 ಜೈಲುಗಳಲ್ಲಿ 2,5000ಕ್ಕೂ ಅಧಿಕ ಖೈದಿಗಳಿಗೆ ಸೋಂಕು ತಗುಲಿತ್ತು. ಈ ಬಾರಿ ಜೈಲಾಧಿಕಾರಿಗಳು ಕೆಲ ಮುಂಜಾಗ್ರತಾ ಕ್ರಮಗಳನ್ನ ವಹಿಸಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.