ಮದರಸಾಗಳನ್ನ ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಿದರೆ ಕಠಿಣ ಕ್ರಮ – ಅಸ್ಸಾಂ ಮುಖ್ಯಮಂತ್ರಿ
ಮದರಸಾಗಳನ್ನು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಮದರಸಾಗಳನ್ನು ಕೆಡವುವುದು ನಮ್ಮ ಉದ್ದೇಶವಲ್ಲ ಎಂದು ಹೇಳಿದರು. ಜಿಹಾದಿ ಶಕ್ತಿಗಳು ಅವುಗಳನ್ನು ಬಳಸದಂತೆ ನೋಡಿಕೊಳ್ಳುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು. ಮದರಸಾದ ನೆಪದಲ್ಲಿ ಭಾರತ ವಿರೋಧಿ ಚಟುವಟಿಕೆ ನಡೆಸುತ್ತಿರುವುದು ಬಹಿರಂಗವಾದರೆ ಆ ಕಟ್ಟಡವನ್ನು ನೆಲಸಮ ಮಾಡಲಾಗುವುದು ಎಂದು ತಿಳಿಸಿದರು.
ಜಿಹಾದಿ ಚಟುವಟಿಕೆಗಳು ನಡೆಯುತ್ತಿರುವುದು ಹಾಗೂ ನಿಯಮಾವಳಿಗೆ ವಿರುದ್ಧವಾಗಿ ಕಟ್ಟಡ ನಿರ್ಮಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಬೊಂಗೈಗಾಂವ್ ಜಿಲ್ಲೆಯ ಮದರಸಾವನ್ನು ಬುಧವಾರ ನೆಲಸಮಗೊಳಿಸಲಾಗಿದೆ. ಈ ಮದರಸಾ ಅಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








