ಮಂಗಳೂರು : ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯನನ್ನು ಸ್ಥಳೀಯ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಯಾಕೂಬ್ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಶಾಕೀರ್ ಕೊಲೆ ಆರೋಪಿಯಾಗಿದ್ದಾನೆ.
ನಿನ್ನೆ ಸಂಜೆ ಅಡ್ಯಾರ್ ಸಮೀಪ ಯಾಕೂಬ್ ಮತ್ತು ಶಾಕೀರ್ ಗೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ಶಾಕೀರ್, ಯಾಕೂಬ್ ನನ್ನು ನೆಲಕ್ಕೆ ದೂಡಿ ಎದೆ ಮೇಲೆ ಬಲವಾಗಿ ತುಳಿದಿದ್ದಾನೆ. ಇದರಿಂದ ತೀವ್ರ ಅಸ್ವಸ್ಥರಾಗಿದ್ದು ಯಾಕೂಬ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯಾಕೂಬ್ ಸಾವನ್ನಪ್ಪಿದ್ದಾರೆ. ಇನ್ನು ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.








