ಬೆಂಗಳೂರು : ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಬೆಂಕಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ, ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ನೀಡುತ್ತಿರುವ ಬೆಂಬಲವೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆಕ್ಕೆ ಇಳಿಯಲು ಕಾರಣ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.