ಮಂಗಳೂರು : ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅದರಂತೆ ಮಂಗಳೂರಿನಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲಿಯ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಎಂದಿನಂತೆ ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮನಾಯ್ಕ, ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪರಪ್ಪೆಯ ಸಿನಾನ್ ಎಂಬ ಯುವಕ ಮುರೂರು ಗಡಿ ಭಾಗಕ್ಕೆ ಬಂದು ಗಡಿ ದಾಟಲು ಯತ್ನ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಗಡಿ ದಾಟದಂತೆ ಮನವಿ ಮಾಡುತ್ತಿದ್ದಂತೆ ಆತ ನೆಲದಿಂದ ಕಲ್ಲು ತೆಗೆದು ಏಕಾಏಕಿ ಪೊಲೀಸರ ಮೇಲೆ ಬಿಸಾಡಿದ್ದಾನೆ. ಪರಿಣಾಮವಾಗಿ ಕರ್ತವ್ಯದಲ್ಲಿದ್ದ ಎ.ಎಸ್.ಐ. ಭಾಸ್ಕರ ಪ್ರಸಾದ್ ಹಾಗೂ ಪೊಲೀಸ್ ಸಿಬ್ಬಂದಿ ರಾಮ ನಾಯ್ಕ ಅವರಿಗೆ ಗಾಯಗಳಾಗಿವೆ. ಮಾತ್ರವಲ್ಲದೆ ಈತ ಸ್ಧಳದಲ್ಲಿದ್ದ ಹೈವೇ ಪಟ್ರೋಲ್ ವಾಹನಕ್ಕೂ ಕಲ್ಲು ತೂರಿ ಅಲ್ಲಿಂದ ಓಡಿಹೋಗಿದ್ದಾನೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮತ್ತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು: ಜಿಪಂ ಸದಸ್ಯೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ...