ಟ್ರ್ಯಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಪಿಎಸ್ ಐ ಮಣಿಕಂಠ ವಿರುದ್ಧ ಮಸ್ಕಿ (Maski) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬ ವ್ಯಕ್ತಿ ಟ್ರ್ಯಾಕ್ಟರ್ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಪಿಎಸ್ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮಣ್ಣು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ. ಅಲ್ಲದೇ ತನ್ನ ಜೀಪ್ನಲ್ಲಿದ್ದ ಪೈಪ್ ತೆಗೆದುಕೊಂಡು ಥಳಿಸಿದ್ದಾರೆ. ಅಲ್ಲದೇ, ಜಾತಿ ನಿಂದನೆ ಮಾಡಿದ್ದಾರೆ ಎಂದು ವ್ಯಕ್ತಿ ರೋಪಿಸಿದ್ದಾರೆ.
ಘಟನೆಯ ನಂತರ ಜನರು ಸರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರ್ವಜನಿಕರ ಒತ್ತಡಕ್ಕೆ ಮಣಿದ ಇಲಾಖೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ ಎನ್ನಲಾಗಿದೆ.








