ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಗುಂಪೊಂದು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಳ್ಳತನದ ಆರೋಪ ಹೊರಿಸಿ ಕೆಲವರು ವ್ಯಕ್ತಿಯೊಬ್ಬನನ್ನು ಥಳಿಸುತ್ತಿರುವುದನ್ನು ನೋಡಬಹುದು.
ಬೆತ್ತಲೆ ವ್ಯಕ್ತಿಯೊಬ್ಬ ಗೋಡೆಗೆ ಒರಗಿಕೊಂಡು ಕುಳಿತಿರುವುದು ಮತ್ತು ಅವನ ಬಟ್ಟೆಗಳು ಅವನ ಪಕ್ಕದಲ್ಲಿ ಬಿದ್ದಿರುವುದು ಕಂಡುಬಂದಿದೆ. ಕಳ್ಳತನದ ಆರೋಪ ಹೊರಿಸಿ ಪೈಪ್ ತುಂಡುಗಳಿಂದ ಥಳಿಸುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ತನ್ನ ಮೊಣಕೈಯಿಂದ ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಮೋತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಧರಮ್ ಕಾಂತಾ ಪ್ರದೇಶದಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಎಸ್ಪಿ ವಿಕ್ರಮ್ ಸಿಂಗ್ ಕುಶ್ವಾಹಾ, ವೀಡಿಯೊಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ, ಎಲ್ಲಿ ಘಟನೆ ನಡೆದಿದೆ ಮತ್ತು ವಿಡಿಯೋದಲ್ಲಿ ಕಾಣುತ್ತಿರುವ ಆರೋಪಿಗಳು ಯಾರು ಎಂಬುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.