Anand Mamani | ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ಇನ್ನಿಲ್ಲ
ಬೆಳಗಾವಿ : ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ವಿಧಿವಶರಾಗಿದ್ದಾರೆ.
ಲಿವರ್ ಕ್ಯಾನ್ಸರ್, ಜಾಂಡೀಸ್ ನಿಂದ ಬಳಲುತ್ತಿದ್ದ ಮಾಮವಿ ಅವರು ಚೆನ್ನೈನಲ್ಲಿ ಚಿಕಿತ್ಸೆ ಪಡೆದು ಬೆಂಗಳೂರಿಗೆ ಶಿಫ್ಟ್ ಆಗಿದ್ದರು. ಆದ್ರೆ ನಿನ್ನೆ 12.02ಕ್ಕೆ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಅವರು, ಓರ್ವ ಮಾದರಿ ಜನಪ್ರತಿನಿಧಿಯಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಕೇವಲ ರಾಜಕೀಯ ಕ್ಷೇತ್ರವಲ್ಲದೆ, ಆನಂದ್ ಮಾಮನಿ ಅವರು ಅನೇಕ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದರು.
2000 ರಿಂದ ಸವದತ್ತಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮತ್ತು ಶ್ರೀ ಕಾಡಶಿದ್ದೇಶ್ವರ ಉಚಿತ ಪ್ರಸಾದ ನಿಲಯ, ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ಸವದತ್ತಿ ಅಧ್ಯಕ್ಷರಾದರು.
2000 ರಿಂದ 2002 ರವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸವದತ್ತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈ ಗನ್ನಡಿಯಾಗಿತ್ತು.
2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.
2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು.
ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.