ಸ್ವರ್ಣಗೌರಿ ವ್ರತ ಇಷ್ಟಾರ್ಥ ಸಿದ್ಧಿಗಾಗಿ, ಸಂತಾನ ಪ್ರಾಪ್ತಿ, ಅವಿವಾಹಿತರಿಗೆ ವಿವಾಹಯೋಗ ಕೂಡಿ ಬರುವ ವ್ರತದ ಆಚರಣೆ..
ಪ್ರತಿ ವರ್ಷ ಗಣೇಶ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಮುತ್ತೈದೆಯರಿಗೆಲ್ಲಾ ಸಕಲ ಸೌಭಾಗ್ಯ ನೀಡುವ ಹಬ್ಬವಾಗಿದೆ. ಈ ಗೌರಿ ಹಬ್ಬ ಭಾದ್ರಪದ ಶುದ್ಧ ತದಿಗೆ ದಿನ ಬರುತ್ತದೆ.
ಈ ಸ್ವರ್ಣ ಗೌರಿ ಪೂಜೆ ಹೇಗೆ ಆಚರಣೆಯಲ್ಲಿ ಬಂತು ಎನ್ನುವ ಕುರಿತು ಸುಂದರವಾದ ಪೌರಾಣಿಕ ಕಥೆ ಚಾಲ್ತಿಯಲ್ಲಿದೆ.
ಚಂದ್ರಪ್ರಭ ಎನ್ನುವ ಅರಸನು ಭೇಟೆಯಾಡಲು ಅರಣ್ಯಕ್ಕೆ ಹೋದಾಗ ಅಲ್ಲಿ ಒಂದು ಸುಂದರವಾದ ನೈಸರ್ಗಿಕ ಸಂಪತ್ತುಳ್ಳ ಸರೋವರದ ಬಳಿ ಅನೇಕ ಅಪ್ಸರೆಯರು ಸ್ವರ್ಣಗೌರಿ ಪೂಜೆಯನ್ನು ಮಾಡುವುದರಲ್ಲಿ ನಿರತರಾಗಿರುವುದನ್ನು ಕಾಣುತ್ತಾನೆ.
ಪೂಜೆಯ ನಂತರ ಪೂಜೆಯ ಮಹತ್ವದ ಬಗ್ಗೆ ತಮಗೆ ತಿಳಿಸಬೇಕು ಎಂದು ಕೇಳುತ್ತಾನೆ. ಆ ಅಪ್ಸರೆಯರು ವ್ರತದ ಬಗ್ಗೆ ತಿಳಿಸುವರು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಿ ಇದನ್ನು ಭಾದ್ರಪದ ಶುದ್ಧ ತದಿಗೆ ದಿನ ಆಚರಿಸಬೇಕೆಂದು ತಿಳಿಸಿ 16 ಗಂಟು ಹಾಕಿದ ದಾರವನ್ನು ಕೊಡುತ್ತಾರೆ.
ರಾಜನು ಅರಮನೆಗೆ ಬಂದ ನಂತರ ತನ್ನ ಇಬ್ಬರು ಪತ್ನಿಯರಿಗೆ ಆ ದಾರವನ್ನು ಕೊಡಲು, ಮೊದಲನೆ ಪತ್ನಿ ಆ ದಾರವನ್ನು ತಿರಸ್ಕರಿಸಿ ಒಣಗಿದ ಗಿಡದ ಮೇಲೆ ಎಸೆದಳು. ಆ ಗಿಡವು ದಾರದ ಮಹಿಮೆಯಿಂದ ತಕ್ಷಣ ಚಿಗುರಿ ಬೆಳೆಯತೊಡಗಿತು. ಅದನ್ನು ಕಂಡ ಕಿರಿಯ ಪತ್ನಿಯು ಆ ದಾರವನ್ನು ಧರಿಸಿ ರಾಜನು ಹೇಳಿದ ಕ್ರಮದಲ್ಲಿ ಸ್ವರ್ಣಗೌರಿ ವ್ರತವನ್ನು ಆಚರಿಸಿದಳು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ನಂತರ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿ ಸತಿಪತಿಯರು ಮುಕ್ತಿಯನ್ನು ಪಡೆದರೆಂಬ ಪ್ರತೀತಿ ಪುರಾಣ ಕಥೆಗಳಲ್ಲಿ ಉಲ್ಲೇಖವಾಗಿದೆ. ಈ ಸ್ವರ್ಣಗೌರಿ ಹಬ್ಬದಲ್ಲಿ ವಾಯಣ ಕೊಡುವುದು ಒಂದು ವಿಶೇಷ. ಅಂದರೆ ಗೌರವಪೂರ್ಣವಾಗಿ ಕೊಡುವ ದಾನ ಅಥವಾ ಸತ್ಕಾರವೆಂದು ಕರೆಯುತ್ತಾರೆ.
ಕುಲದೇವರಿಗೆ;ಗ್ರಾಮ ದೇವರಿಗೆ ;ಕುಟುಂಬದಲ್ಲಿ ಮುತ್ತೈದೆಯಾಗಿ ಮರಣ ಹೊಂದಿದವರಿಗೆ ವಾಯಣ ತೆಗೆದಿಟ್ಟು ಮನೆಯ ಮುತ್ತೈದೆಯರಿಗೆ
ಮುತ್ತೈದೆಯಾದ ಅಕ್ಕ ತಂಗಿಯರಿಗೆ ವಾಯಣ ಕೊಡಬೇಕಾಗುತ್ತದೆ. ಹಿರಿಯ ಮುತ್ತೈದೆಯರಿಗೆ ವಾಯಣ ಕೊಡಬೇಕು.ಈ ವಾಯಣವನ್ನು ಪಡೆಯುವುದರಿಂದ ಮುತ್ತೈದೆಯರು ಸೌಭಾಗ್ಯವನ್ನು ಪಡೆಯುತ್ತಾರೆ ಎನ್ನುವ ನಂಬಿಕೆ ಇದೆ. ಗೌರಿಯನ್ನು ಕೂರಿಸಿ ಪೂಜೆ ಮಾಡುವ ಪದ್ಧತಿ ಎಲ್ಲರ ಮನೆಯಲ್ಲಿ ಇರುವುದಿಲ್ಲ. ಆದ್ದರಿಂದ ಸುಮಂಗಲಿಯರು ವಾಯಣಕ್ಕೆ ಪೂಜೆ ಸಲ್ಲಿಸುತ್ತಾರೆ.
ಮುತ್ತೈದೆಯರು ಸ್ವರ್ಣಗೌರಿ ವ್ರತವನ್ನು ನಿಷ್ಠೆಯಿಂದ ಆಚರಿಸಿದಲ್ಲಿ ಖಂಡಿತವಾಗಿ ಸಂತಾನ ಪ್ರಾಪ್ತಿ, ಅವಿವಾಹಿತರಿಗೆ ವಿವಾಹಯೋಗ ಮತ್ತು ವಿದ್ಯಾರ್ಥಿಗಳಿಗೆ ಜ್ಞಾನ ದೊರೆಯುತ್ತದೆ ಎನ್ನುವುದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ.
“ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ
ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣೀ ನಮೋಸ್ತುತೇ”.







