ಆಷಾಢ ; ಶ್ರಾವಣ ಮಾಸಗಳಲ್ಲಿ ಹೆಣ್ಣು ಮಕ್ಕಳು ಈ ರೀತಿ ಶಾಸ್ತ್ರೋವಾದ ಲಕ್ಷ್ಮೀಪೂಜಾ ವ್ರತ ಆಚರಣೆ ಮಾಡಿ ಇಷ್ಟಾರ್ಥ ಕಾರ್ಯಸಿದ್ಧಿ ಆಗುತ್ತದೆ..
ಚಾತುರ್ಮಾಸ ದ ಈ ಕಾಲ “ಲಕ್ಷ್ಮೀ ಪೂಜೆ” ಗೆ ಸಕಾಲ ಈ ಪೂಜೆಯನ್ನು ( ವ್ರತವನ್ನು) ಶುಕ್ರವಾರ ಅಥವ
ಹುಣ್ಣಿಮೆ ; ಅಮಾವಾಸ್ಯೆ ಮಂಗಳವಾರ ಮಾಡುತ್ತಾರೆ.
ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಯಾವುದೇ ಶುಕ್ರವಾರ
ಲಕ್ಷ್ಮೀ ದೇವಿಗೆ ಪೂಜೆ ಮಾಡಬಹುದು..
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ವಿಧಾನ–:
ಸಾಮನ್ಯವಾಗಿ ಎಲ್ಲ ಪೂಜೆಗಳಿಗೂ ಉಪಯೋಗಿಸುವ
ಸಾಮಗ್ರಿಗಳು:
ರಂಗೋಲಿ , ಮಣೆ / ಮಂಟಪ
ಲಕ್ಷ್ಮೀ ವಿಗ್ರಹ ಅಥವಾ ಕಲಶ (ದೇವರ ಪಟ)
ದೀಪ, , ತುಪ್ಪ, ಎಣ್ಣೆ,
ದೀಪಕ್ಕೆ ಹಾಕುವ ಬತ್ತಿ
ಘಂಟೆ, ಪಂಚಪಾತ್ರೆ,
ಉದ್ದರಣೆ, ಅರ್ಘ್ಯ ಪಾತ್ರೆ, ನೀರು
ಅರಿಶಿನ, ಕುಂಕುಮ,
ಮಂತ್ರಾಕ್ಷತೆ,ಮಾವಿನ ಎಲೆ
ಶ್ರೀಗಂಧ, ಊದಿನ ಕಡ್ಡಿ
ರವಿಕೆ ಬಟ್ಟೆ,
ಹೂವು, ಪತ್ರೆ, ಗೆಜ್ಜೆ ವಸ್ತ್ರ ಪಂಚಾಮೃತ – ಹಾಲು,
ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
ವೀಳ್ಯದ ಎಲೆ, ಅಡಿಕೆ,
ಹಣ್ಣು , ತೆಂಗಿನಕಾಯಿ
ನೈವೇದ್ಯ – ಹಣ್ಣು ಕಾಯಿ ಫಲವಸ್ತು
(ಪಾಯಸ,ಹುಗ್ಗಿ, ಅನ್ನ, ಕೋಸಂಬರಿ, ನೀರಲ್ಲಿ ನೆನೆ ಹಾಕಿದ ಕಡಲೆ ), ಇತ್ಯಾದಿ #ಯೋಗ್ಯತಾನುಸಾರ
ಕರ್ಪೂರ,
ಮಂಗಳಾರತಿ ಬತ್ತಿ
ಆರತಿ ತಟ್ಟೆ,
ಹೂಬತ್ತಿ,
ಇತ್ಯಾದಿ ಇವುಗಳೊಂದಿಗೆ
ಇನ್ನು ಹಲವಾರು ವಸ್ತುಗಳ ಬಳಕೆ
ಮಾಡಬಹುದು (ಮುಖ್ಯವಾಗಿ ಅಲಂಕಾರ
ಮಾಡುವುದಕ್ಕೆ ಮನೆಯಲ್ಲಿನ ಹೂ ಮತ್ತು ಪತ್ರೆ ಅತ್ಯಂತ ಶ್ರೇಷ್ಟ.)
ಅವರವರ ಯೋಗ್ಯತೆ ಗೆ ಅನುಸಾರ
ಇದು ಪ್ರತಿಯೊಬ್ಬರ ಆಸಕ್ತಿ ಮತ್ತು ಅಭಿರುಚಿ ಮೇಲೆ
ಅವಲಂಭಿಸಿದೆ.
ನಿಯಮಗಳು
1 ಬೆಳಿಗ್ಗೆ ಎದ್ದು ಮಂಗಳ (ತಲೆ) ಸ್ನಾನ ಮಾಡಬೇಕು.
2)ವ್ರತ ಮಾಡುವವರು ಪೂಜೆ
ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ
ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ
ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ
ಸ್ಥಾಪಿಸಬೇಕು.
3)ಬಾವಿಯಿಂದ ಒಂದು ಕಲಶದಲ್ಲಿ
ನೀರು ಹಾಕಿ, ಜೊತೆಗೆ ಅರಿಶಿನ ಕುಂಕುಮ,
ಬೆಳ್ಳಿ ನಾಣ್ಯ / ಯಾವುದೇ ನಾಣ್ಯ, ಹೂ
ಹಾಕಿ,ಕಳಶದ ಬಾಯಿಗೆ ಮಾವಿನ
ಎಲೆಗಳನ್ನು ಇಡಬೇಕು. .ಅದರ ಮೇಲೆ ಅರಿಶಿನ ಕುಂಕುಮ ಸವರಿದ
ತೆಂಗಿನಕಾಯಿ ಇಟ್ಟು, (ಇದರ ಮೇಲೆ ಲಕ್ಷ್ಮಿ ದೇವಿಯ ಬೆಳ್ಳಿಯ
ಮುಖವಾಡ ಇದ್ದರೆ ಅದನ್ನುಈ ತೆಂಗಿನಕಾಯಿಗೆ
ಜೋಡಿಸಬಹುದು) ಈ ಕಳಶವನ್ನು ಅಕ್ಕಿ ಹರಡಿರುವ
ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ
ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ
ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ಒಡವೆ ಹಾಕಿ
ಅಲಂಕಾರ ಮಾಡಬಹುದು. ಈ ಕಲಶಕ್ಕೆ
ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ,
ಕಲಶವನ್ನು ಪೂಜೆ ಮಾಡಬೇಕು.
4)ಪೂಜಾ ವಿಧಾನ
ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು.
ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ
ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿರುವ
ಅತಿಥಿ. ಅತಿಥಿಗಳಿಗೆ ಹೇಗೆ ಉಪಚಾರ ಮಾಡುತ್ತಿರೋ ,
ಹಾಗೆಯೆ ದೇವರಿಗೆ ಪೂಜೆ ರೂಪದಲ್ಲಿ ಉಪಚಾರ
ಮಾಡಬೇಕು ಅಷ್ಟೆ.
ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ
ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ – ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ
ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ
ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ
ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ,
ನಕ್ಷತ್ರವನ್ನು ಹೆಸರಿಸಬಹುದು
sankalpa manthra🙂
ಶುಭೇ ಶೋಭನೇ ಮುಹೂರ್ತೇ
ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ
ವರಾಹ ಕಲ್ಪೇ ವೈವಸ್ವತ
ಮನ್ವಂತರೇ ಕಲಿಯುಗೇ ಪ್ರಥಮ
ಪಾದೇ ಜಂಬೋ ದ್ವೀಪೇ
ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ
ತೀರೇ ಶಾಲೇವಾಹನಶಖೇ
ಬೌದ್ಧಾವತಾರೇ(ಪರಶುರಾಮಕ್ಷೇತ್ರೇ) ಅಸ್ಮಿನ್
ವರ್ತಮಾನೇ ವ್ಯಾವಹಾರಿಕೇ ವಿಲಂಬಿ ನಾಮ
ಸಂವತ್ಸರೇ, ದಕ್ಷಿಣಾಯನೇ ,…
ಗ್ರೀಷ್ಮ ಋತೌ , ಆಷಾಢ ಮಾಸೇ ,ಶುಕ್ಲ (ಕೃಷ್ಣ)ಪಕ್ಷೇ , …
…..ತಿಥಿಯಾಂ ,ಶುಕ್ರ(ಭೃಗು )ವಾಸರ ಯುಕ್ತಾಯಾಂ , ಶುಭ
ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ
ವಿಶೇಷಣ ವಿಶಿಷ್ಟಾಯಾಂ ಶುಭತಿಥೌ ,
ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ
ವಿಜಯ ವೀರ್ಯ ಅಭಯ ಆಯುರಾರೋಗ್ಯ
ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ
ದುರಿತೋಪಶಾಂತ್ಯರ್ಥಂ ಸಮಸ್ತ
ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ
ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ
ಪುರುಷಾರ್ಥ ಸಿಧ್ಧ್ಯರ್ಥಂ ಯಾವತ್ ಜೀವನ ಸೌಮಾಂಗಲ್ಯ ಪ್ರಾಪ್ಯರ್ಥಂ ಶ್ರೀ ….ಮಹಾಲಕ್ಷ್ಮೀ ಪ್ರೀತ್ಯರ್ಥಂ ಯಾಥಾ ಶಕ್ತ್ಯಾ
ಧ್ಯಾನಾವಾಹನಾದಿ ಷೋಡಶೋಪಚಾರ
ಪೂಜಾಂ ಅಹಂ ಕರಿಷ್ಯೇ.
ಧ್ಯಾನ
||ಪದ್ಮಾಸನೆ ಪದ್ಮಕರೇ ಸರ್ವ ಲೋಕೈಕ
ಪೂಜಿತೆ|
ನಾರಾಯಣ ಪ್ರಿಯೇದೇವಿ ಸುಪ್ರೀತಾ ಭವ
ಸರ್ವದಾ”…||
(ನೀವು ಪೂಜೆ ಮಾಡುತ್ತಿರುವ
ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ
ಮಾಡುವುದು. ಸಾಮಾನ್ಯವಾಗಿ
ಷೋಡಶೋಪಚಾರದಿಂದ ಪೂಜೆ
ಅಂತ ನೀವು ಕೇಳಿರಬಹುದು. ಷೋಡಶ
ಅಂದರೆ 16.
ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ
ಎಂದರ್ಥ. ಇವುಗಳ ವಿವರ ಕೆಳಗಿದೆ:
ಇಲ್ಲಿ ಅಕ್ಷತೆ ಹಾಕಬೇಕು (ಸ್ತ್ರೀ ಸೂಕ್ತ ತಿಳಿದವರು ಹೇಳುವುದು)
1.ಆವಾಹನೆ – (ಅಂದರೆ ಆಹ್ವಾನ. ದೇವರನ್ನು ನಿಮ್ಮ
ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ
ಆಹ್ವಾನ ಮಾಡುವುದು.)ಮಹಾಲಕ್ಷ್ಮೀಯೇ ನಮಃ ಆವಾಹಯಾಮಿ ಆವಾಹನಂ ಸಮರ್ಪಯಾಮಿ
2.ಆಸನ – ಅಂದರೆ ಕುಳಿತುಕೊಳ್ಳುವ ಜಾಗ . ದೇವರ
ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಅಕ್ಷತೆ
ಹಾಕುವುದು.ಮಹಾಲಕ್ಷ್ಮೀಯೇ ನಮಃ ಆಸನಂ ಸಮರ್ಪಯಾಮಿ
3.ಪಾದ್ಯ – ಕಾಲು ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಪಾದ್ಯಂ ಸಮರ್ಪಯಾಮಿ (ಹರಿವಾಣದಲ್ಲಿ ನೀರು ಬಿಡುವುದು)
4.ಅರ್ಘ್ಯ – ಕೈ ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಅರ್ಘ್ಯಂ ಸಮರ್ಪಯಾಮಿ(ಹರಿವಾಣದಲ್ಲಿ ನೀರು ಬಿಡುವುದು)
5.ಆಚಮನ – ಕುಡಿಯುವುದಕ್ಕೆ
ನೀರು ಕೊಡುವುದು.ಮಹಾಲಕ್ಷ್ಮೀಯೇ ನಮಃ ಆಚಮನಂ ಸಮರ್ಪಯಾಮಿ
6.ಸ್ನಾನ – ಶುದ್ಧೋದಕ (ನೀರು)
ಮತ್ತು ಪಂಚಾಮೃತದಿಂದ ಸ್ನಾನ
ಮಹಾಲಕ್ಷ್ಮೀಯೇ ನಮಃ ಸ್ನಾನಂ ಸಮರ್ಪಯಾಮಿ








