ಭೂಮಿಯ ಗಾತ್ರದಷ್ಟೇ ಇರುವ ಮತ್ತೊಂದು ಗ್ರಹವನ್ನು ಖಗೋಳಶಾಸ್ತ್ರಜ್ಞರು ಪತ್ತೆ ಹಚ್ಚಿದ್ದಾರೆ. ಇದಕ್ಕೆ “ಎಲ್‌ಪಿ 791-18ಡಿ” ಎಂದು ಹೆಸರಿಟ್ಟಿದ್ದಾರೆ.
ಈ ಗ್ರಹವು ಜ್ವಾಲಾಮುಖೀಗಳಿಂದ ಕೂಡಿದ್ದು, ಇಲ್ಲಿ ಮಾನವರು ಜೀವನ ನಡೆಸಲು ಅನುಕೂಲವಾಗಿರುವ ವಾತಾವರಣ ಇದೆ ಎಂದು ಖಗೋಳ ಶಾಸ್ತ್ರಜ್ಞರು ಊಹಿಸಿದ್ದಾರೆ. ಈ ಗ್ರಹವು ತನ್ನಿಂದ 90 ಜ್ಯೋತಿರ್ವರ್ಷ ದೂರವಿರುವ ಕೆಂಪು ಕುಬ್ಜ ನಕ್ಷತ್ರ ಸುತ್ತುತ್ತಿದೆ. ಈ ನಕ್ಷತ್ರದ ಹೆಸರು “ಕ್ರೇಟರ್”. ಈ ಗ್ರಹದಲ್ಲಿ ಜ್ವಾಲಾಮುಖೀಗಳು ಸ್ಫೋಟಗೊಳ್ಳುತ್ತಿವೆ ಎಂದು ಅಮೆರಿಕದ ಹಾರ್ವರ್ಡ್ ವಿವಿ ಮತ್ತು ಸ್ಮಿತ್‌ಸೋನಿಯನ್ ಸಂಸ್ಥೆಯ ಖಗೋಳ ಭೌತಶಾಸ್ತ್ರ ವಿಭಾಗದ ಸಂಶೋಧಕರ ತಂಡ ಹೇಳಿದೆ.
ಅಮೆರಿಕದ ನಾಸಾದ ಟ್ರಾನ್ಸಿಟಿಂಗ್ ಎಕ್ಸೋಪ್ಲಾನೆಟ್ ಸರ್ವೆ ಸ್ಯಾಟಲೈಟ್(ಟಿಇಎಸ್‌ಎಸ್) ಮತ್ತು ಸ್ಪಿಟ್ಜರ್ ಬಾಹ್ಯಾಕಾಶ ದೂರದರ್ಶಕ ಬಳಸಿ ಖಗೋಳಶಾಸ್ತ್ರಜ್ಞರು ಈ ಸಂಶೋಧನೆ ನಡೆಸಿದ್ದಾರೆ. ಈ ಸಂಶೋಧನಾತ್ಮಕ ಅಧ್ಯಯನವನ್ನು “ನೇಚರ್’ ನಿಯತಕಾಲಿಕೆಯಲ್ಲಿ ತಿಳಿಸಿದ್ದಾರೆ.