Aswath Narayan : ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ – ವಿಷಾಧ ವ್ಯಕ್ತಪಡಿಸಿದ ಅಶ್ವಥ್ ನಾರಾಯಣ್…
ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಎನ್ನುವ ವಿವಾದಾತ್ಮಕ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಟಿಪ್ಪು ಹೆಸರು ಉಲ್ಲೇಖ ಮಾಡಿದೆ. “ ಟಿಪ್ಪು ಜಯಂತಿಯನ್ನ ಕಾಂಗ್ರೆಸ್ ಮಾಡ್ತಿದೆ. ಅದನ್ನ ಖಂಡಿಸುವಂತೆ ಆಗಬೇಕು. ಜನರಿಗೆ ನಾನು ಸ್ಪಷ್ಟವಾಗಿ ಹೇಳಿದೆ.
ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು. ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ. ಯುದ್ಧದ ಕಾಲದಲ್ಲಿ ಇಲ್ಲ, ಪ್ರಜಾಪ್ರಭುತ್ವ ದಲ್ಲಿ ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ. ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವಯಕ್ತಿಕವಾಗಿ ಅಲ್ಲ ಎಂದು ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಗೆಲುವು ಸೋಲು ಚುನಾವಣೆ ಯಲ್ಲಿ ಇದ್ದೆ ಇದೆ. ಓಲೈಕೆ ಮಾಡುವ ಪಕ್ಷ ಸೋಲಿಸಬೇಕು, ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶ. ಅವರಿಗೆ ವಯಕ್ತಿಕ ವಾಗಿ ನೋವಾಗಿದ್ರೆ ವಿಷಾಧ ವ್ಯಕ್ತಪಡಿಸ್ತೇನೆ. ಇವರ ಹಾಗೆ ಸಿಎಂ ಗೆ ನಾಯಿ, ಪ್ರಧಾನಿಗೆ ನರ ಹಂತಕ, ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ. ಇವರ ಹಾಗೆ ವಯಕ್ತಿಕವಾಗಿ ವಿರೋಧ ಮಾಡಿಲ್ಲ. ಮತ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ ಎಂದು ಹೇಳಿದ್ದಾರೆ.
Aswath Narayan: Killing of Tipu Prabh Siddaramaiah – Aswath Narayan expressed regret…