ಗಾಂಧಿನಗರ: ಸಿಡಿಲಿಗೆ ಬರೋಬ್ಬರಿ 20 ಜನ ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಗುಜರಾತ್ನಲ್ಲಿ (Gujarat) ಅಕಾಲಿಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭಾರೀ, ಗುಡುಗು ಸಿಡಿಲು ಅಬ್ಬರಿಸುತ್ತಿವೆ. ಹೀಗಾಗಿ ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದರೆ, ಕೆಲವರು ಗಾಯಗೊಂಡಿದ್ದಾರೆ. ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗುಜರಾತ್ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕರು ಸಾವನ್ನಪ್ಪಿದ್ದಾರೆ. ಸುದ್ದಿಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತುಂಬಲಾರದ ನಷ್ಟವಾಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾ ಸಂತಾಪ ಸೂಚಿಸಿದ್ದಾರೆ.ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್, ಅಮ್ರೇಲಿ ಜಿಲ್ಲೆಗಲ್ಲಿ ವ್ಯಾಪಕವಾದ ಮಳೆಯಾಗುತ್ತಿದೆ.