ತಳ್ಳೋ ಗಾಡಿಯಲ್ಲಿ ಪತಿಯ ಶವ ಸಾಗಿಸಿದ ಪತ್ನಿ..!!
ಚಿಕ್ಕೋಡಿ : ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವವನ್ನು ಪತ್ನಿ ತಳ್ಳೋ ಗಾಡಿಯಲ್ಲಿ ಸಾಗಿಸಿದ ಅಮಾನವೀಯ ಘಟನೆ ಬೆಳಗಾವಿಯ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. 55 ವರ್ಷದ ಸದಾಶಿವ ಹಿರಟ್ಟಿ ಮೃತ ವ್ಯಕ್ತಿಯಾಗಿದ್ದಾರೆ. ಈತ ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂದೆ ಚಪ್ಪಲಿ ಹೊಲಿದುಕೊಂಡಿದ್ದ ಎಂದು ತಿಳಿದುಬಂದಿದೆ.
ಸದಾಶಿವ ಅವರು ನಿನ್ನೆ ತಡರಾತ್ರಿ ಮನೆಗೆ ಹೋಗಿ ಮಲಗಿದಲ್ಲೇ ಮೃತಪಟ್ಟಿದ್ದರು. ಬೆಳಿಗ್ಗೆ ಪತ್ನಿ ಕರೆ ಮಾಡಿ ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ಆದ್ರೆ ಕೊರೊನಾ ಬಂದು ಸಾವನ್ನಪ್ಪಿರಬಹುದು ಎಂಬ ಆತಂಕದಿಂದ ಸಂಬಂಧಿಕರು ಹಾಗೂ ಸ್ಥಳೀಯರು ಯಾರು ಸಹಾಯಕ್ಕೆ ಬರಲೇ ಇಲ್ಲ. ಇದರಿಂದ ಮೃತನ ಪತ್ನಿಯೇ ಪತಿ ಮೃತ ದೇಹವನ್ನು ಬಟ್ಟೆಯಲ್ಲಿ ಸುತ್ತಿ ಶವ ಸಾಗಿಸಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಸಹ ಹೆಗಲಿಲ್ಲದೆ ತಳ್ಳುವ ಗಾಡಿಯಲ್ಲಿ ಹಾಕಿ ಶವ ಸಾಗಾಣೆ ಮಾಡಿ ಅಂತ್ಯ ಸಂಸ್ಕಾರ ಮಾಡಲಾಗಿದೆ.