ಬಸ್ತಾರ್: ಭದ್ರತಾ ಪಡೆ ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದು, 33 ನಕ್ಸಲೀಯರು ಶರಣಾಗತರಾಗಿದ್ದಾರೆ.
ಛತ್ತೀಸ್ಗಢದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳಿಂದ ದಾಳಿ ನಡೆದಿತ್ತು. ಶರಣಾದ ನಕ್ಸಲೀಯರಿಗೆ ತಲಾ 25 ಸಾವಿರ ರೂ. ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಮೂವರನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಭದ್ರತಾ ಪಡೆ ಘೋಷಿಸಿತ್ತು. ಇದೀಗ ಅವರೇ ಶರಣಾಗಿದ್ದಾರೆ.