ರಾಯಚೂರು: ಮದ್ಯವನ್ನು ಸಾಲಕ್ಕೆ ನೀಡದ ಹಿನ್ನೆಲೆಯಲ್ಲಿ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಜಿಲ್ಲೆಯ ಮಾನ್ವಿ (Manvi) ಪಟ್ಟಣದಲ್ಲಿ ಮದ್ಯದಂಗಡಿಯಲ್ಲಿ (Bar) ಎಣ್ಣೆ ಸಾಲ (Debt) ಸಿಗದಿದ್ದಕ್ಕೆ ಈ ಘಟನೆ ನಡೆದಿದೆ. ಬಾರ್ ಶಾಪ್ ಮಾಲೀಕ ಮಲ್ಲಿಕಾರ್ಜುನಗೌಡರ ಮೇಲೆ ಸ್ಥಳೀಯ ನಿವಾಸಿ ಚಾಂದ್ ಎಂಬಾತನಿಂದ ಈ ಕೃತ್ಯ ನಡೆದಿದೆ.
ಈತ ಪದೇ ಪದೇ ಸಾಲ ಕೇಳುತ್ತಿದ್ದ. ಹೀಗಾಗಿ ಮಾಲೀಕರು ಕೊಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿರೋ ಮಲ್ಲಿಕಾರ್ಜುನಗೌಡ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.