ಕೊಪ್ಪಳ: ಜೈ ಶ್ರೀರಾಮ್ ಹೇಳುವಂತೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಗಂಗಾವತಿ ನಗರದ ಸಿದ್ದಿಕೇರಿ ಹತ್ತಿರದ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಇಲ್ಲಿ ಮುಸ್ಲಿಂ ವ್ಯಕ್ತಿಗೆ ʼಜೈ ಶ್ರೀರಾಮ್ʼ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಹುಸೇನಸಾಬ್ ಹಲ್ಲೆಗೆ ಒಳಗಾದ ವ್ಯಕ್ತಿ ಎನ್ನಲಾಗಿದೆ. ಕೆಲಸದ ಹಿನ್ನೆಲೆಯಲ್ಲಿ ಹೊಸಪೇಟೆಗೆ ಹೋಗಿ ಮಧ್ಯರಾತ್ರಿಯ ವೇಳೆಯಲ್ಲಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೋಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಯುವಕರು ಸಿದ್ದಿಕೇರಿ ಸಮೀಪದ ರೈಲ್ವೆ ಬ್ರಿಡ್ಜ್ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾರೆ. ನನ್ನ ಬಳಿ ಇದ್ದ ಹಣ ಕೂಡ ದೋಚಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.