ದಕ್ಷಿಣ ಕನ್ನಡಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಚುನಾವಣಾ ಫಲಿತಾಂಶದಂದು ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ದಾಳಿಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮಾಣಿ ಜಂಕ್ಷನ್ ಬಳಿ ದ್ವಿಚಕ್ರ ವಾಹನ