ತುಮಕೂರು: ಪ್ರತಿಭಟನೆ ಸಂದರ್ಭದಲ್ಲಿ ಡಿವೈಎಸ್ಪಿ ಮೇಲೆ ಹಲ್ಲೆ ನಡೆಸಿರುವ ಘಠನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನಗರ ಡಿವೈಎಸ್ಪಿ ಪಿ.ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾನ್ ಹ್ಯಾಂಡಲ್ ಮಾಡಿದ್ದ ಆರೋಪಿ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಿಜೆಪಿ ಕಾರ್ಯಕರ್ತ ವೆಂಕಟೇಶ (42) ಬಂಧಿತ ಆರೋಪಿ. ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ತಳ್ಳಾಟ ನಡೆದಿತ್ತು. ಈ ವೇಳೆ ಡಿವೈಎಸ್ಪಿ ಮೇಲೆ ಹಲ್ಲೆ ನಡೆದಿತ್ತು. ಆಗ ಡಿವೈಎಸ್ಪಿ ಮೂಗಿನ ಮೇಲೆ ರಕ್ತಸ್ರಾವ ಉಂಟಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.