ಬೆಂಗಳೂರು: ಇಲ್ಲಿಯ ಕೋರ್ಟ್ ಆವರಣದಲ್ಲೇ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪವೊಂದು ಕೇಳಿ ಬಂದಿದೆ.
ಈ ಘಟನೆ ಆನೇಕಲ್ ಗಡಿ ಹೊಸೂರಿನಲ್ಲಿ ನಡೆದಿದೆ. ವಕೀಲರೊಬ್ಬರ ಮೇಲೆ ಮಚ್ಚಿನಿಂದ ಕೊಚ್ಚಿ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಕಣ್ಣನ್, ಕೋರ್ಟ್ ಆವರಣದಲ್ಲಿ ಹಲ್ಲೆಗೊಳಗಾದ ವಕೀಲ. ಆನಂದ್ ಎಂಬಾತ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಹಲ್ಲೆ ಖಂಡಿಸಿ ವಕೀಲರು ಪ್ರತಿಭಟನೆ ನಡೆಸಿದ್ದು, ಆರೋಪಿಗೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.