ಇಸ್ಲಾಮಾಬಾದ್: ಪಾಕ್ ನಲ್ಲಿ ಇಬ್ಬರು ಪ್ಯಾಲೆಸ್ತೀನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು, ತಮ್ಮ ವಿದೇಶಿ ಮಹಿಳಾ ಸಹಪಾಠಿಗಳಿಗೆ ಸ್ಥಳೀಯ ವ್ಯಕ್ತಿಗಳು ಕಿರುಕುಳ ನೀಡಿದ್ದನ್ನು ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪಂಜಾಬ್ ಪ್ರಾಂತ್ಯದ ಗುಜ್ರಾನ್ ವಾಲಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.
ವೈದ್ಯಕೀಯ ಕಾಲೇಜಿನ ಅಬ್ದುಲ್ ಕರೀಮ್ ಮತ್ತು ಖಲ್ದೂನ್ ಅಲ್ಶೇಖ್ ಹಲ್ಲೆಗೊಳಗಾದ ವಿದ್ಯಾರ್ಥಿಗಳು ಎನ್ನಲಾಗಿದೆ. ಅಪಾರ್ಟ್ಮೆಂಟ್ನಿಂದ ಹೊರಬರುತ್ತಿದ್ದ ಅಬ್ದುಲ್ ಮತ್ತು ಖಾಲ್ದೂನ್ ಮೇಲೆ ಏಳು ಜನರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡಿದವರು ವಿದೇಶಿ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದರು. ಅದನ್ನು ಪ್ಯಾಲೆಸ್ತೀನ್ನ ವಿದ್ಯಾರ್ಥಿಗಳು ವಿರೋಧಿಸಿದ್ದರು ಎನ್ನಲಾಗಿದ್ದು, ಹೀಗಾಗಿ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.