ಕೋಲಾರ: ಹೈಟೆಕ್ ವೇಶ್ಯಾವಾಟಿಕೆ ಅಡ್ಡಾ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಮಹಿಳೆಯರನ್ನು ರಕ್ಷಿಸಿ, 14 ಜನರನ್ನು ಬಂಧಿಸಿದ್ದಾರೆ.
ಜಿಲ್ಲೆಯ ದೊಡ್ಡ ದೊಡ್ಡ ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದವು. ಈಗ ರೆಸಾರ್ಟ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ 14 ಜನರನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಮುಳಬಾಗಿಲು (Mulabagilu) ತಾಲೂಕು ರಾಕ್ ವ್ಯಾಲಿ ರೆಸಾರ್ಟ್ (Rock Valley Resort) ಮೇಲೆ ದಾಳಿ ನಡೆಸಿದ್ದ ಪೊಲೀಸರು, 14 ಜನರನ್ನು ಬಂಧಿಸಿ 6 ಮಹಿಳೆಯರನ್ನ ರಕ್ಷಣೆ ಮಾಡಿದ್ದಾರೆ. ಕೋಲಾರ ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬೈರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕಳೆದ ಹಲವು ದಿನಗಳಿಂದ ಈ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ರೆಸಾರ್ಟ್ ಮಾಲೀಕ ಸೇರಿದಂತೆ ಹೈದರಾಬಾದ್ (Hyderabad) ಮೂಲದ ಆರು ಜನ ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್ ಮೂಲದ ಅಜಯ್ ಎಂಬ ವ್ಯಕ್ತಿ ಮಹಿಳೆಯರನ್ನು ಕೆರೆತರುತ್ತಿದ್ದ ಎನ್ನಲಾಗಿದೆ. ದಾಳಿ ವೇಳೆ ಸುಮಾರು ಹತ್ತಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಒಂದು ವರ್ಷದಲ್ಲಿ ಈ ರೆಸಾರ್ಟ್ ಮೇಲೆ ಇದು ಎರಡನೇ ದಾಳಿಯಾಗಿದೆ.








