ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮುಂಬಯಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ನೂ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.
ಬಾಂದ್ರಾದಲ್ಲಿರುವ ನಿವಾಸಕ್ಕೆ ದುಷ್ಕರ್ಮಿಗಳು ನುಗ್ಗಿದ್ದಾರೆ ಎನ್ನಲಾಗಿದೆ. ದರೋಡೆಕೋರನನ್ನು ಹಿಡಿಯಲು ಯತ್ನಿಸಿದಾಗ ಸೈಫ್ ಅಲಿ ಖಾನ್ ಎಚ್ಚರಗೊಂಡು ಹೊರಗೆ ಬಂದಿದ್ದಾರೆ. ಆಗ ಸೈಫ್ ಕುತ್ತಿಗೆ, ಕೈ ಸೇರಿದಂತೆ 6 ಕಡೆ ಚಾಕುವಿನಿಂದ ಇರಿಯಲಾಗಿದೆ. 2 ಕಡೆ ಗಂಭೀರವಾಗಿ ಪೆಟ್ಟಾಗಿದೆ. ಹೆಚ್ಚು ರಕ್ತಸ್ರಾವ ಆಗಿರುವ ಹಿನ್ನೆಲೆಯಲ್ಲಿ ಕೂಡಲೇ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಕರೀನಾ ಕಪೂರ್ ಮತ್ತು ಮಕ್ಕಳು ಸೇಫ್ ಆಗಿದ್ದಾರೆ.