ಬೆಂಗಳೂರು : ರಸ್ತೆಯಲ್ಲಿ ನಿಂತಿದ್ದ ಲಾರಿಗಳಿಂದ ಮಧ್ಯರಾತ್ರಿ ಡೀಸೆಲ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಹಿಡಿದು ಲಾರಿ ಚಾಲಕರು ಥಳಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹೊಸಕೋಟೆ(Hoskote) ಹೊರವಲಯದ ಮಾಲೂರು ರಸ್ತೆಯಲ್ಲಿ ನಡೆದಿದೆ. ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಕಳ್ಳರನ್ನು ಡೀಸೆಲ್ ಕದಿಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಚಾಲಕರು ಹಿಡಿದಿದ್ದಾರೆ. ಅವರ ಮೇಲೆ ಲಾರಿ ಚಾಲಕರು ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಓರ್ವ ಕಳ್ಳ ಅಸ್ವಸ್ಥನಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಚಾಲಕರು ಮೃತ ಕಳ್ಳನ ಮೃತದೇಹವನ್ನ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಿ, ಮರ್ತೋರ್ವ ಕಳ್ಳನನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.