ಬೆಂಗಳೂರು: ಇಂದು ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಇತ್ತ ರಾಜ್ಯದಲ್ಲಿ ಐಟಿ ಅಧಿಕಾರಿಗಳು ಹಲವು ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಲಿಕಾನ್ ಸಿಟಿಯ ಹತ್ತಕ್ಕೂ ಅಧಿಕ ಕಡೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರಬಹುದು ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ನಡೆಸಿದ್ದರು. ಡಿಕೆ ಶಿವಕುಮಾರ್ ಆಪ್ತ ಕೆಂಪರಾಜು ಮನೆ ಮೇಲೆ ಕೂಡ ಅಧಿಕಾರಿಗಳು ಹಿಂದೆ ದಾಳಿ ನಡೆಸಿದ್ದರು. ಈಗ ಹಲವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.