ಬೆಂಗಳೂರು: ಕನ್ನಡ (Kannada) ಮಾತನಾಡಲು ಬಾರದ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ವಿಜಯನಗರದ ಹಂಪಿನಗರದಲ್ಲಿ (Hampinagara) ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಗೆ ಬರುವ ಮೊದಲೇ ಮದ್ಯ (Alcohol) ಸೇವಿಸಿದ್ದ ವ್ಯಕ್ತಿ ವಸ್ತು ಖರೀದಿಸಿದ ನಂತರ ಹಣ ಪಾವತಿಸಿರಲಿಲ್ಲ. ಈ ಸಂದರ್ಭದಲ್ಲಿ ಕ್ಯಾಶಿಯರ್ ಹಣ ಕೇಳಿದ್ದಕ್ಕೆ ಕನ್ನಡದಲ್ಲಿ ಮಾತನಾಡುವಂತೆ ಹೇಳಿದ್ದಾನೆ. ಕನ್ನಡ ಬರಲ್ಲ ಎಂದಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.








