ಮುಂಬೈ : ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ವಾಸಿಸುತ್ತಿದ್ದ ಮನೆ `ರಾಜಗೃಹ’ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತಂತೆ ಡಾ. ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ಮಾಹಿತಿ ನೀಡಿದ್ದಾರೆ.
ಅಂಬೇಡ್ಕರ್ ಕುಟುಂಬಸ್ಥರು ಮನೆಯಲ್ಲಿದ್ದ ಸಂದರ್ಭ ಕೆಲ ವ್ಯಕ್ತಿಗಳು ಎರಡು ಕೊಠಡಿಗಳತ್ತ ಕಲ್ಲು ತೂರಿದ್ದಾರೆ. ಒಂದು ಕೊಠಡಿ ಮ್ಯೂಸಿಯಂ ಹಾಗೂ ಫೋಟೋ ಗ್ಯಾಲರಿ ಹಾಗೂ ಬಾಬಾಸಾಹೇಬ್ ಅವರ ಪುಸ್ತಕಗಳ ಕೊಠಡಿಯಾಗಿದ್ದರೆ ಇನ್ನೊಂದು ಅವರ ಕಚೇರಿ/ಸಭಾ ಕೊಠಡಿಯಾಗಿದೆ ಎಂದು ಸುಜತ್ ತಿಳಿಸಿದ್ದಾರೆ.
ಈ ಘಟನೆಯನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಖಂಡಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳಕ್ಕೆ ದಲಿತ ಸಂಘಟನೆಯ ಸದಸ್ಯರು ಆಗಮಿಸಿ ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.
ರಸಗೊಬ್ಬರ ಘಟಕದಲ್ಲಿ ಗ್ಯಾಸ್ ಲೀಕ್; 9 ಜನ ಬಲಿ
ಮುಂಬಯಿ: ಮಹಾರಾಷ್ಟ್ರ (Maharashtra)ದ ಸಾಂಗ್ಲಿ (Sangli) ಜಿಲ್ಲೆಯ ರಸಗೊಬ್ಬರ ಘಟಕವೊಂದರಲ್ಲಿ ಗ್ಯಾಸ್ ಲೀಕ್ ಆದ ಪರಿಣಾಮ ಮೂವರು ಸಾವನ್ನಪ್ಪಿ, 9 ಜನ ಗಾಯಗೊಂಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರ...