16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ – ಟೆರೆಸ್ ನಿಂದ ಕೆಳಗೆಸೆದ ಕಾಮುಕರು
ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಯಾವ ಮಟ್ಟಿಗಿದೆ ಎಂಬುದನ್ನ ಯೋಚನೆ ಮಾಡೋದು ಅನಿವಾರ್ಯವಾಗಿದೆ ಅನ್ನುವಷ್ಟರ ಮಟ್ಟಿಗೆ ಅಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ದಿನೇ ದಿನೇ ಮಹಿಳೆಯರು, ಬಾಲಕಿಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ , ಸಾಮೂಹಿಕ ಅತ್ಯಾಚಾರದಂತಹ ಹೇಯ ಕೃತ್ಯಗಳು ನಡೆಯುತ್ತಲೇ ಇವೆ. ಆದ್ರೂ ಸರ್ಕಾರ ಯಾಕೆ ಸೂಕ್ತ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಕ್ರಮ ಕೈಗೊಳ್ತಿದ್ರೂ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲೇ ಇರುವುದಕ್ಕೆ ಕಾರಣವೇನು ಎನ್ನುವಷ್ಟರ ಮಟ್ಟಿಗೆ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕೌಟುಂಬಿಕ ಪಿಂಚಣಿ ಮಿತಿ ಏರಿಕೆ..!
ಮತ್ತೊಂದು ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರು ಕಾಮುಕ ಯುವಕರು 16 ವರ್ಷದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ವೇಳೆ ಸ್ಥಳಕ್ಕೆ ಹುಡುಗಿಯ ತಂದೆ ಬರುವುದನ್ನು ಗಮನಿಸಿ ಟೆರೆಸ್ ನಿಂದ ಬಾಲಕಿಯನ್ನು ಕೆಳಗೆ ನೂಕಿದ್ದಾರೆ.
ದೆಹಲಿ ರೈತಹೋರಾಟ : ಟೂಲ್ ಕಿಟ್ ಹಂಚಿಕೆ – ಬೆಂಗಳೂರಿನಲ್ಲಿ ಪರಿಸರ ಕಾರ್ಯರ್ತೆಯ ಬಂಧನ
ಇದರಿಂದಾಗಿ ಬಾಲಕಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯನ್ನು ಅಪಹರಿಸಿದ್ದ ಆರೋಪಿಗಳು ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಆಕೆಯ ತಂದೆ ಅಲ್ಲಿಗೆ ಆಗಮಿಸಿದಾಗ ಕಟ್ಟಡದಿಂದ ಕೆಲಗೆ ತಳ್ಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಜ್ಞೆ ಮರಳಿದ ನಂತರ ಬಾಲಕಿ ಪೋಷಕರಿಗೆ ನಡೆದ ವಿಷಯವನ್ನು ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಲಾಗಿದೆ.
ಮಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ, ಮೂವರು ಅರೆಸ್ಟ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








