7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ತುಮಕೂರು ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿಯಾಗಿರುವ ಹಾಗೂ ಆಟೋ ಓಡಿಸುತ್ತಿದ್ದ ಷಫಿ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.