ಮಂಗಳೂರು: ಕಾಮುಕರ ಗುಂಪೊಂದು ಪಬ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಮಂಗಳೂರಿನ ಪಾಂಡೇಶ್ವರದ ಮಾಲ್ ವೊಂದರಲ್ಲಿ ನಡೆದಿದೆ. ಯುವತಿಯೊಬ್ಬರು ಸ್ನೇಹಿತೆಯೊಂದಿಗೆ ಪಬ್ ಗೆ ಬಂದಿದ್ದ ಸಂದರ್ಭದಲ್ಲಿ ನಾಲ್ವರು ಕಾಮುಕರ ಗುಂಪು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿಯರ್ ಬಾಟಲಿಯಿಂದಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಯುವತಿಯ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ (Pandeshwara) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪುತ್ತೂರಿನ ವಿನಯ್(33), ಮಹೇಶ್ (27), ಪ್ರಿತೇಶ್ (34) ಹಾಗೂ ನಿತೇಶ್ (33) ಎಂದು ಗುರುತಿಸಲಾಗಿದೆ. ಪಾಂಡೇಶ್ವರ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.