ಕೋಲಾರ: ಕಣ್ಣಿಗೆ ಖಾರದಪುಡಿ ಎರಚಿ ಕೊಲೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಜ್ರನಾಗೇನಹಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ನಾರಾಯಣಸ್ವಾಮಿ ಎಂಬುವವರನ್ನೇ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಾರಾಯಣಸ್ವಾಮಿ ಅವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಘಟನೆಯಲ್ಲಿ ಅದೃಷ್ಟವಶಾತ್ ನಾರಾಯಣಸ್ವಾಮಿ ಬದುಕುಳಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.