Kolar | ಕೋಲಾರದಲ್ಲೂ ಕೋಮು ಸಂಘರ್ಷಕ್ಕೆ ಪ್ರಯತ್ನ
ಕೋಲಾರ : ಇಷ್ಟು ದಿನ ಕೋಲಾರ ಶಾಂತಿಯಾಗಿತ್ತು. ಈಗ ಹಾಳು ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕೋಲಾರದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಸೈಕಲ್ ಮೇರಥಾನ್ ನಡೆಸುತ್ತಿದ್ದು, ಈ ಬಗ್ಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಕೋಲಾರದಲ್ಲೂ ಕೋಮು ಸಂಘರ್ಷಕ್ಕೆ ಪ್ರಯತ್ನ ಮಾಡುತ್ತಿದ್ದಾರೆ.
ಕೋಲಾರ ಶಾಂತಿಯಾಗಿತ್ತು. ಈಗ ಹಾಳು ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಬೇಸರ ಹೊರಹಾಕಿದರು.
ಇನ್ನು ರಾಜ್ಯಕ್ಕೆ ಈ ರೀತಿಯ ಪರಿಸ್ಥಿತಿ ಬರುತ್ತೆ ಅಂತಾ ನಾನು ಊಹೆ ಮಾಡಿರಲಿಲ್ಲ. ಶಾಲಾ ಮಕ್ಕಳಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ರಾಜ್ಯದ ಇವತ್ತಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಕಾರಣ.
ಬಿಜೆಪಿ 104 ಸ್ಥಾನ ಪಡೆಯಲು ಸಿದ್ದರಾಮಯ್ಯ ನೇರವಾಗಿದ್ದಾರೆ. ಜೆಡಿಎಸ್, ಬಿಜೆಪಿ ಬಿಟೀಂ ಎಂದು ಹೇಳಿಕೆಯಿಂದ ಆ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.