ಪಾಪಿ ಪತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗೋವಾ ಹೋಟೆಲ್ ಮ್ಯಾನೇಜರ್ ನನ್ನು ಬಂಧಿಸಲಾಗಿದೆ. ಗೌರವ್ ಕಟಿಯಾರ್ ಬಂಧಿತ ಆರೋಪಿಯಾಗಿದ್ದು, ಪತ್ನಿ ದೀಕ್ಷಾ ಗಂಗ್ವಾರ್ (27) ಅವರನ್ನೇ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ ಎನ್ನಲಾಗಿದೆ.
ಇವರು ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಆದರೆ, ಆತನಿಗೆ ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧ ಇತ್ತು. ಪತ್ನಿ ಇದಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಸಮುದ್ರದಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.