ನವದೆಹಲಿ : ಮುಂದಿನ ತಿಂಗಳ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದಾರೆ. ಅಂದು ಬೆಳಗ್ಗೆ ಎಂಟು ಗಂಟೆಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ನಡುವಿನ ಅವಧಿಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ ಮೂರು ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮ ನೆರೆವೇರಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಪ್ರಮುಖ 300 ಮಂದಿ ಹೋರಾಟಗಾರರನ್ನು ಆಹ್ವಾನಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ.








