ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್ ರಾಡ್ ಮಾರ್ಷ್ ಇನ್ನಿಲ್ಲ..!
ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಾಡ್ ಮಾರ್ಷ್ (74) ನಿಧನರಾಗಿದ್ದಾರೆ. ಅವರು ಶುಕ್ರವಾರ ಕ್ವೀನ್ಸ್ಲ್ಯಾಂಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಗುರುವಾರ ಹೃದಯಾಘಾತಕ್ಕೆ ಒಳಗಾದ ಮಾರ್ಷ್ ಅವರನ್ನು ಕ್ವೀನ್ಸ್ಲ್ಯಾಂಡ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಬಲಿಷ್ಠ ತಂಡವಾಗಿ ಹೊರಹೊಮ್ಮುವಲ್ಲಿ ಮಾರ್ಷ್ ಪ್ರಮುಖ ಪಾತ್ರ ವಹಿಸಿದ್ದರು. ಮಾರ್ಷ್ 1970-80ರಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದರು.
ಮಾರ್ಷ್ ಟೆಸ್ಟ್ನಲ್ಲಿ ಶತಕ ಬಾರಿಸಿದ ಮೊದಲ ಆಸ್ಟ್ರೇಲಿಯನ್ ವಿಕೆಟ್ಕೀಪರ್ ಆಗಿದ್ದಾರೆ. ಅವರು ಟೆಸ್ಟ್ ನಲ್ಲಿ ಮೂರು ಶತಕಗಳನ್ನು ಗಳಿಸಿದ್ದಾರೆ.
ಮಾರ್ಷ್ 96 ಟೆಸ್ಟ್ ಮತ್ತು 92 ODIಗಳಲ್ಲಿ ಆಸೀಸ್ ಅನ್ನು ಪ್ರತಿನಿಧಿಸಿದ್ದಾರೆ. ಅವರು 1970 ರಲ್ಲಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯವನ್ನಾಡಿದ್ದರು.
ಇನ್ನ ಮಾರ್ಷ್ ಅವರ ನಿಧನಕ್ಕೆ ಇಡೀ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ.