ಆಸ್ಟ್ರೇಲಿಯಾ-ನ್ಯೂಜಿಲೆಂಡ್ ವಿಮಾನಗಳಲ್ಲಿ ಪ್ರಯಾಣಿಸುವವರ ಮೇಲೆ ಹೆಚ್ಚಿನ ನಿಗಾ..!
ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಿಂದ ಸಿಡ್ನಿಗೆ ಬಂದ ಪ್ರಯಾಣಿಕರಲ್ಲಿ ಹೆಚ್ಚಿನವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆ , ಆಸ್ಟ್ರೇಲಿಯಾ –ನ್ಯೂಜಿಲೆಂಡ್ ನಡುವೆ ವಿಮಾನಗಳಲ್ಲಿ ಪ್ರಯಾಣಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.
ಹೀಗಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ಪ್ರಯಾಣಿಸಿರುವ ಎರಡೂ ವಿಮಾನಗಳಲ್ಲಿನ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಲು ಮತ್ತು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಆದೇಶಿಸಲಾಗಿದೆ.
ಸಿಡ್ನಿಯಲ್ಲಿ ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಡುವೆ ಮೂರು ದಿನದ ವರೆಗೆ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ ಎಂದು ನ್ಯೂಜಿಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಟ್ರೇಲಿಯಾದ ಹೆಚ್ಚು ಜನಸಂಖ್ಯೆ ಹೊಂದಿರುವ ನ್ಯೂ ಸೌತ್ ವೇಲ್ಸ್‌ನಲ್ಲಿ ಕಳೆದ 6 ದಿನಗಳಿಂದ 21 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.