ಕೋವಿಡ್ ಸಂಕಷ್ಟ : ವಿದೇಶಿಗರ ಪ್ರಯಾಣದ ನಿಯಮ ಕಠಿಣಗೊಳಿಸಿದ ಆಸ್ಟ್ರೇಲಿಯಾ
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ…
ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ವಿವಿಧ ದೇಶಗಳು ವಿದೇಶಿ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ನಿರ್ಬಂಧನೆಗಳನ್ನ ಹೇರುತ್ತಿದ್ದಾರೆ.. ಇದೀಗ ವಿದೇಶಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ಮೇಲೆ ಕಡಿವಾಣ ಹಾಕಲು ಆಸ್ಟ್ರೇಲಿಯಾ ಸರ್ಕಾರ ತೀರ್ಮಾನಿಸಿದೆ.
ಹೌದು ಸೋಂಕು ನಿಯಂತ್ರಣಕ್ಕಾಗಿ ಕೆಲವು ನಗರಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್ ಅನ್ನು ತೆರವುಗೊಳಿಸಿದ್ದ ಬೆನ್ನಲ್ಲೆ, ಈಗ ವಿದೇಶಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ಮೇಲೆ ಮಿತಿ ಹೇರಲು ನಿರ್ಧರಿಸಿದೆ. ಜುಲೈ 14ರಿಂದ ಜಾರಿಗೆ ಬರುವಂತೆ, ದೇಶಕ್ಕೆ ಬರುವ ಪ್ರಯಾಣಿಕರ ಸಂಖ್ಯೆಯನ್ನು ಶೇ 50ರಷ್ಟು ಕಡಿತಗೊಳಿಸಲು ತೀರ್ಮಾನಿಸಿದೆ.
‘ವಾರಕ್ಕೆ ಈಗ ಬರುತ್ತಿರುವ 6 ಸಾವಿರ ಪ್ರಯಾಣಿಕರ ಸಂಖ್ಯೆಯನ್ನು 3 ಸಾವಿರಕ್ಕೆ ನಿರ್ಬಂಧಿಸಲಾಗುತ್ತದೆ‘ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ತಿಳಿಸಿದ್ದಾರೆ. ಪ್ರತಿ ಬಾರಿ ಹೊರ ದೇಶದಿಂದ ಬರುವ ಪ್ರಯಾಣಿಕರನ್ನು ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಹೋಟೆಲ್‌ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು, ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.