Australia : ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ಗೆ ಆಸ್ಟ್ರೇಲಿಯಾ ಎಂಟ್ರಿ
ಟೀಂ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ಗೆ ಎಂಟ್ರಿಕೊಟ್ಟಿದೆ.
ಇಂಧೋರ್‌ನಲ್ಲಿ ನಡೆದ ತೃತೀಯ ಟೆಸ್ಟ್‌ನಲ್ಲಿ ಸಂಘಟಿತ ಪ್ರದರ್ಶನ ನೀಡಿದ ಆಸೀಸ್ ಭರ್ಜರಿ 9 ವಿಕೆಟ್‌ಗಳ ಗೆಲುವು ಸಾಧಿಸಿತು.
ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ ನೀರಸ ಪ್ರದರ್ಶನ ನೀಡಿದ್ದ ಆಸ್ಟ್ರೇಲಿಯಾ 3ನೇ ಟೆಸ್ಟ್‌ನಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿತು. ಬ್ಯಾಟಿಂಗ್, ಬೌಲಿಂಗ್ ಎರಡು ವಿಭಾಗದಲ್ಲಿ ಮಿಂಚಿದ ಆಸ್ಟ್ರೇಲಿಯಾ ಗೆಲುವಿನ ನಗೆಬೀರುವಲ್ಲಿ ಯಶಸ್ವಿಯಾಯಿತು.
ಕೇವಲ 3ನೇ ದಿನದಾಟದಲ್ಲೇ ಪಂದ್ಯವನ್ನ ಗೆದ್ದುಬೀಗಿದ ಆಸ್ಟ್ರೇಲಿಯಾ ಈ ಗೆಲುವಿನ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಗೆ ಎಂಟ್ರಿಕೊಟ್ಟಿದೆ. ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿರುವ ಆಸೀಸ್ ತನ್ನ ಎದುರಾಳಿಗಾಗಿ ಕಾಯುತ್ತಿದ್ದು, ಜೂನ್‌ನಲ್ಲಿ ನಡೆಯುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ನಲ್ಲಿ ಭಾರತ ಅಥವಾ ಶ್ರೀಲಂಕಾ ತಂಡವನ್ನ ಎದುರಿಸುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಆರಂಭಿಕ ಎರಡು ಟೆಸ್ಟ್‌ಗಳಲ್ಲಿ ಗೆದ್ದುಬೀಗಿದ್ದ ಭಾರತ 3ನೇ ಟೆಸ್ಟ್‌ನಲ್ಲಿ ಗೆದ್ದು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿತ್ತು.
ಆದರೆ 9 ವಿಕೆಟ್‌ಗಳ ಸೋಲಿನ ಆಘಾತ ಕಂಡಿರುವ ಟೀಂ ಇಂಡಿಯಾ, ಸರಣಿಯ 4ನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಒಂದೊಮ್ಮೆ ನ್ಯೂಜಿ಼ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾ ತಂಡ 2-0 ಅಂತರದಲ್ಲಿ ಗೆಲುವು ಸಾಧಿಸಿದ್ದೇ ಆದಲ್ಲಿ, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ತೀರಾ ಕಡಿಮೆಯಾಗಲಿದೆ.
ಒಂದು ವೇಳೆ ಭಾರತ 4ನೇ ಟೆಸ್ಟ್‌ನಲ್ಲಿ ಸೋತರೆ ನ್ಯೂಜಿ಼ಲೆಂಡ್ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ ಸೋಲಬೇಕು ಅಥವಾ ಒಂದು ಪಂದ್ಯ ಡ್ರಾ ಆಗಬೇಕೆಂದು ಕಾಯಬೇಕಾಗುತ್ತದೆ.
Australia , ICC test championship , saakshatv