Australian PM : ಇಂದಿನಿಂದ ನಾಲ್ಕು ದಿನಗಳ ಭಾರತ ಪ್ರವಾಸಕ್ಕೆ ಕೈಗೊಳ್ಳಲಿರುವ ಆಸ್ಟ್ರೇಲಿಯಾ ಪ್ರಧಾನಿ…
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಮಾರ್ಚ್ 8 ರಿಂದ ಮಾರ್ಚ್ 11 ರವರೆಗೆ ಭಾರತಕ್ಕೆ ನಾಲ್ಕು ದಿನಗಳ ಪ್ರ ವಾಸ ಮಾಡಲಿದ್ದಾರೆ. ಆರು ವರ್ಷಗಳ ಬಳಿಕ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಈ ಬೇಟಿಯಲ್ಲಿ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಕುರಿತು ಚರ್ಚೆ ನಡೆಯಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಪ್ರಕಾರ, ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಯ ಜೊತೆಗೆ ಆಸ್ಟ್ರೇಲಿಯಾದ ವ್ಯಾಪಾರ ಮತ್ತು ಪ್ರವಾಸೋದ್ಯಮ ಸಚಿವ ಸೆನೆಟರ್ ಡಾನ್ ಫಾರೆಲ್ ಮತ್ತು ಸಂಪನ್ಮೂಲಗಳ ಮಂತ್ರಿ ಮತ್ತು ಉತ್ತರ ಆಸ್ಟ್ರೇಲಿಯಾದ ಮೆಡೆಲೀನ್ ಕಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಉನ್ನತ ಮಟ್ಟದ ನಿಯೋಗದೊಂದಿಗೆ ಬರಲಿದ್ದಾರೆ.
ಆಂಥೋನಿ ಅಲ್ಬನೀಸ್ ಬುಧವಾರ ಟ್ವಿಟ್ ಮಾಡಿ “ಇಂದು ನಾನು ಮಂತ್ರಿಗಳು ಮತ್ತು ಉದ್ಯಮಿಗಳ ನಿಯೋಗವನ್ನು ಭಾರತಕ್ಕೆ ಕರೆತರುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ನಾವು ಅಹಮದಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡುತ್ತೇವೆ “ ಎಂದಿದ್ದಾರೆ.
ಭಾರತ ಭೇಟಿಯ ಸಂದರ್ಭದಲ್ಲಿ, ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಸ್ಟ್ರೇಲಿಯಾದಲ್ಲಿ ಗಮನಾರ್ಹ ಹೂಡಿಕೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಭಾರತ ಮತ್ತು ಆಸ್ಟ್ರೇಲಿಯಾ ಶುದ್ಧ ಇಂಧನ ಕ್ಷೇತ್ರದಲ್ಲಿ ಸಹಕರಿಸಲು ಉತ್ಸುಕವಾಗಿವೆ.
Australian PM Anthony Albanese on 4-day India visit from today