ಬೈಕಿಗೆ ಆಟೋ ಡಿಕ್ಕಿ : ಅಜ್ಜ, ಮೊಮ್ಮಗಳು ಸಾವು
ಹಾಸನ : ಬೈಕ್ ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಅಜ್ಜ ಹಾಗೂ ಮೊಮ್ಮಗಳು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಕಮಲಾಪುರ ಸಮೀಪ ಸಂಭವಿಸಿದೆ.
7 ವರ್ಷದ ನಾಗಲಕ್ಷ್ಮಿ ತನ್ನ ಅಜ್ಜ ನಾಗರಾಜ್ (62) ಜೊತೆ ಬೈಕಿನಲ್ಲಿ ತೆರಳುತ್ತಿದ್ದಳು. ಈ ವೇಳೆ ಎದುರಿನಿಂದ ಬಂದ ಆಟೋ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಇತ್ತ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಗರಾಜ್ ರನ್ನು ನಗರದ ಸರ್ಕಾರದ ಜೆ.ಸಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆ ಹಾಸನಕ್ಕೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಈ ಘಟನೆ ಕುರಿತು ಜಾವಗಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.