ಸಮಾಜದ ಜಾಗೃತಿ , ಸಂಘಟನೆ ಅತ್ಯಗತ್ಯ – ರಮೇಶ್ ಜಾರಕಿಹೊಳಿ
ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ 3 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶವನ್ನ ಹಮ್ಮಿಕೊಳ್ಳಲಾಗಿತ್ತು. ಈ ಸಾಮಾವೇಶದ ಅಧ್ಯಕ್ಷತೆಯನ್ನ ಸಚಿವ ರಮೇಶ್ ಜಾರಕಿಹೊಳಿ ಅವರು ವಹಿಸಿಕೊಂಡಿದ್ರು.
ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು ಸಮಾಜದಲ್ಲಿ ಜಾಗೃತಿ ನಿರ್ಮಾಣ ಮತ್ತು ಸಬಲ ಸಂಘಟನೆಯ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ನ್ಯಾಯಸಮ್ಮತವಾಗಿ ಸವಲತ್ತುಗಳನ್ನು ಪಡೆಯಲು ಸಂಘಟನಾ ಶಕ್ತಿ ಪ್ರದರ್ಶಿಸಬೇಕಾದ ಸಂದರ್ಭ ಇದಾಗಿದೆ ಎಂದು ಹೇಳಿದರು.
ಧಾರ್ಮಿಕ ಸ್ಥಳಗಳಲ್ಲಿ ‘ಶಬ್ದಮಾಲಿನ್ಯ’ ತಡೆಗೆ ರಾಜ್ಯ ಹೈಕೋರ್ಟ್ ಆದೇಶ
ಅಲ್ದೇ ನಾಯಕ ಜನಾಂಗದ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಆರ್ಥಿಕ, ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯುವ ದಿಸೆಯಲ್ಲಿ ಸಾಂಘಿಕ ಶಕ್ತಿ ಪ್ರದರ್ಶಿಸಬೇಕಾಗಿದೆ ಎಂದರು. ಈ ಸಮಾವೇಶದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಜರಿದ್ದರು. ಈ ವೇಳೆ ಚಲನಚಿತ್ರ ನಟ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಜನಜಾಗೃತಿ ಸಮಾವೇಶದ ಸಾನಿಧ್ಯ ವಹಿಸಿದ್ದರು.
ರಾಬರ್ಟ್ ಪೋಸ್ಟರ್ ರಿಲೀಸ್ ಮಾಡಿ ಶುಭಕೋರಿದ ‘ಕೌರವ’..!
ದೇವರನ್ನ ಮೆಚ್ಚಿಸಲು ಮಗನನ್ನ ಕೊಂದ ತಾಯಿ
UP ಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಮನವಿ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್..!
ಚೀನಾ ಅಧ್ಯಕ್ಷ ‘ಜಿನ್ ಪಿಂಗ್’ ದೇಹದಲ್ಲಿ ‘ಪ್ರಜಾಸತ್ತಾತ್ಮಕ ಎಲುಬಿಲ್ಲ’: ಜೋ ಬೈಡನ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel