ದಾವಣಗೆರೆ: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತರು ವಿವಿಧ ರೀತಿಯಲ್ಲಿ ರಾಮ ಮಂದಿರ, ರಾಮನನ್ನು ರಚಿಸುತ್ತಿದ್ದಾರೆ. ಇಲ್ಲೊಂದೆಡೆ ನಾಣ್ಯದಲ್ಲಿಯೇ ಮಂದಿರ ರಚಿಸಿದ್ದು, ಪ್ರಧಾನಿ ಮೋದಿ ಅವರಿಗೆ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ.
ದಾವಣಗೆರೆಯಲ್ಲಿ (Davanagere) ಈ ರೀತಿ ಮಂದಿರಿ ಸಿದ್ಧವಾಗಿದ್ದು, ಇದನ್ನು ಪ್ರಧಾನಿ ಅವರಿಗೆ ಉಡುಗೊರೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಹರಿಹರ ನಗರದ ಆಕಾರ-ಆಧಾರ ಸಂಸ್ಥೆಯ ರಾಮು ಎಂ ಹಾಗೂ ಮಕ್ಕಳು ಒಂದು, ಎರಡು, ಐದು, 10, 20 ರೂ. ಮೌಲ್ಯದ ಒಟ್ಟು 12 ಸಾವಿರ ನಾಣ್ಯ ಬಳಸಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದ್ದಾರೆ. 31,500 ರೂ. ವೆಚ್ಚದಲ್ಲಿ 30 ದಿನಗಳಲ್ಲಿ ಈ ಮಂದಿರ ನಿರ್ಮಾಣ ಮಾಡಿದ್ದಾರೆ ಎನ್ನಲಾಗಿದೆ.