B C Nagesh | ಆರ್ ಎಸ್ ಎಸ್ ಇಟಲಿಯನ್ ಮೂಲವಲ್ಲ
ಕೊಪ್ಪಳ : : ಆರ್ ಎಸ್ ಎಸ್ ಮೂಲದ ಬಗ್ಗೆ ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಆರ್ ಎಸ್ ಎಸ್ ಇಟಲಿ ಮೂಲವಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನಾಗೇಶ್, ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದರು.
ಆರ್ ಎಸ್ ಎಸ್ ಮೂಲ ತಿಳಿದುಕೊಂಡು ಏನಾದರೂ ಮಾಡಬಹುದಿತ್ತು. ಆದರೆ ಆರ್ ಎಸ್ ಎಸ್ ಇಟಲಿಯನ್ ಮೂಲ ಅಲ್ಲ ಎಂದು ಟಾಂಗ್ ನೀಡಿದರು.
ಇದೇ ವೇಳೆ ಹಿಜಾಬ್ ವಿವಾದ ಬಗ್ಗೆ ಮಾತನಾಡಿದ ಸಚಿವರು, ಇದರ ಹಿಂದೆ ಕಾಂಗ್ರೆಸ್ ಪಿತೂರಿ ಇದೆ ಎಂದು ಆರೋಪಿಸಿದರು. ನಾವು ಹಿಜಾಬ್ ನೋಡುತ್ತಿಲ್ಲ.
ಅದರ ಹಿಂದೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿರುವ ಕಾಣದ ಕೈಗಳನ್ನು ನೋಡುತ್ತಿದ್ದೇವೆ.
ಈ ದೇಶದ ಕಾನೂನು ಉಲ್ಲಂಘನೆ ಮಾಡೋ ಪಿತೂರಿ ನೋಡುತ್ತಿದ್ದೇವೆ.
ಇವತ್ತಲ್ಲ ನಾಳೆ ಇವರು ಇಡೀ ದೇಶದ ಕಾನೂನು ಉಲ್ಲಂಘನೆ ಮಾಡುತ್ತೇವೆ ಅನ್ನುತ್ತಾರೆ ಎಂದರು.
ಇನ್ನು ಪಠ್ಯ ಪುಸ್ತಕ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈ ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸುವುದರಲ್ಲಿ ಎಡವಟ್ಟಾಗಿದೆ.
ಇತಿಹಾಸದ ಪುಸ್ತಕಗಳ ರಚನೆಯಲ್ಲಿ ಲೋಪವಾಗಿದ್ದು, ಮುಂಬರುವ ದಿನಗಳಲ್ಲಿ ವಿಭಿನ್ನ ಕಾರ್ಯಕ್ರಮದ ಮೂಲಕ ನಾವು ನಿಜವಾದ ಇತಿಹಾಸ ಪರಿಚಯಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
b-c-nagesh-congress-italian-origin-not-rss