ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ…
ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನರಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಹೆಬ್ಬಾಳ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 8.20 ಕ್ಕೆ ವಿಧಿವಶರಾಗಿದ್ದಾರೆ.
76ರ ವಯಸ್ಸಿನ ಬಿಕೆಎಸ್ ವರ್ಮಾ ಅವರು ಪರಿಸರ, ಆಧ್ಯಾತ್ಮ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು. ಭುವನೇಶ್ವರಿ, ವೃಕ್ಷದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಹಲವು ದೇವರ ಪಟದ ಚಿತ್ರಗಳು ಇವರಿಗೆ ಜನಪ್ರಿಯತೆಯನ್ನ ತಂದುಕೊಟ್ಟಿವೆ.
6ನೇ ವಯಸ್ಸಿಗೆ ಹವ್ಯಾಸವಾಗಿ ರೇಖಾಚಿತ್ರ ಪ್ರಾರಂಭಿಸಿದ್ದ ವರ್ಮಾ ಅವರು ಅಂದಿನಿಂದ ನಿರಂತರವಾಗಿ ಆರೇಳು ದಶಕಗಳ ಕಾಲ ಚಿತ್ರಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇವರ ತಾಯಿ ಜಯಲಕ್ಷ್ಮೀ ಸಹ ಚಿತ್ರ ಕಲಾವಿದರಾಗಿದ್ದರು. ತಂದೆ ಕೃಷ್ಣಮಾಚಾರ್ಯರು ಸಂಗೀತಗಾರರಾಗಿದ್ದರು.
ಬಿಕೆಸ್ ವರ್ಮಾ ಅವರನ್ನ ಅರಸಿಕೊಂಡು ಅನೇಕ ಪ್ರಶಸ್ತಿ, ಪುರಸ್ಕಾರಗಳು ಬಂದಿವೆ. ಇವರ ಸಾಧನೆಗೆ ಲಲಿತಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್ ಗಾಂಧಿ ಪ್ರಶಸ್ತಿ ಲಭಿಸಿವೆ. ಬೆಂಗಳೂರು ವಿವಿ ಯಿಂದ 2011ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
B. K. S Varma: The famous veteran painter of Karnataka B. K. S. Varma is no more…