ಬೆಂಗಳೂರು: ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಯತ್ನಾಳ್ ಮತ್ತು ತಂಡದ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ವೈಯಕ್ತಿಕ ಸ್ವ ಪ್ರತಿಷ್ಠೆಯಿಂದ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಎಲ್ಲರೂ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡಿದ್ದಾರೆ. ಆದರೆ, ಅವರು ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ, ಅವರೆಲ್ಲರೂ ಸೇರಿ ಪಕ್ಷವನ್ನು ಬಲಪಡಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಉಪ ಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ. ಹೀಗಾಗಿ ಎಲ್ಲರೂ ಒಂದಾಗಿ ಚರ್ಚೆ ನಡೆಸಬೇಕು. ಮುಂದೆ ಹೀಗಾಗದಂತೆ ಎಚ್ಚರಿಕ ವಹಿಸಬೇಕು ಎಂದಿದ್ದಾರೆ.








