ಕಲಬುರಗಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿದ್ದಾರೆ.
ಈ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದುಕೊಂಡಿದ್ದೇನೆ.
ಕೇಂದ್ರದ ನಾಯಕರು ಯಾವ ರೀತಿಯಾಗಿ ಸೂಚನೆ ನೀಡುತ್ತಾರೆ ನೋಡಬೇಕಿದೆ. ಇಂದು ದೆಹಲಿಗೆ ಭೇಟಿ ನೀಡುತ್ತೇನೆ.
ಪ್ರಧಾನಿ ಮೋದಿ ಮತ್ತು ಸಚಿವರನ್ನು ಭೇಟಿಯಾಗುತ್ತಿದ್ದೇನೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಹಳಬರನ್ನು ಸಂಪುಟದಿಂದ ಕೈಬಿಡು ವಿಚಾರವಾಗಿ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಅಭಿಪ್ರಾಯ ತೆಗೆದುಕೊಂಡು ನಂತರ ವಿಸ್ತರಣೆ ಮಾಡಲಾಗುವುದು.
ದೆಹಲಿಗೆ ಹೋದ ಮೇಲೆ ನಾಳೆ ಈ ಕುರಿತು ಚರ್ಚೆ ನಡೆಯಲಿದೆ.
ಈ ವೇಳೆ ಹಳಬರನ್ನು ಕೈ ಬಿಟ್ಟು, ಹೊಸಬರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು. ಇದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಮಾಹಿತಿ ನೀಡಿದರು.