B.S.Yeddyurappa | ಮುರುಘಾ ಶ್ರೀಗೆ ತಕ್ಕ ಶಿಕ್ಷೆಯಾಗಬೇಕು
ಉಡುಪಿ : ಮುರುಘಾ ಶ್ರೀ ಕ್ಷಮಿಸಲಾಗದ ಅಕ್ಷಮ್ಯ ಅಪರಾಧ ಮಾಡಿದ್ದಾರೆ.
ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ.
ಇದನ್ನ ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅಲ್ಲದೆ ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 140 ಸೀಟು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಲದೇ ನಾನು ಮತ್ತು ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ.
ಈ ಭಾಗದಲ್ಲಿ ನೂರಕ್ಕೆ ನೂರು ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಹಿಂದು ಭಾರತೀಯ ಪದವಲ್ಲ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ ಬಿಎಸ್ ಯಡಿಯೂರಪ್ಪ, ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.








