ಎಂಇಎಸ್ ಉದ್ಧಟತನವನ್ನು ಸಹಿಸೋದಿಲ್ಲ : ಯಡಿಯೂರಪ್ಪ B S Yeddyurappa saaksha tv
ಮೈಸೂರು : ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಉದ್ದಟತನ ತೋರಿದ್ದಾರೆ.
ಇದನ್ನ ಯಾರು ಸಹಿಸೋದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗಬೇಕು. ಕೂಡಲೆ ಆರೋಪಿಗಳನ್ನ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಯಣ್ಣ ಪ್ರತಿಮೆ ಹಾನಿಗೆ ಸಂಬಂಧಿಸಿದಂತೆ ಮಾತನಾಡಿ, ಅದು ಸಂಗೊಳ್ಳಿ ರಾಯಣ್ಣ ಪ್ರತಿಮೆಯಾಗಿರಲಿ ಮತ್ತಾವುದೇ ಮಹನೀಯರ ಪ್ರತಿಮೆಯಾಗಿರಲಿ, ಹಾನಿ ಮಾಡಬಾರದು.
ಪ್ರತಿಮೆಗೆ ಹಾನಿಮಾಡಿದವರ ವಿರುದ್ಧ ಕೂಡಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಈ ವಿಚಾರವನ್ನ ವಿಧಾನ ಮಂಡಲದಲ್ಲು ಚರ್ಚೆ ಮಾಡುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.